<?= $pageTitle ?>
Logo
ಮುಖಪುಟ ಓದುವುದು ಕೇಳು
Breaking News

ಭಾರತ-ಬಾಂಗ್ಲಾ ಗಡಿ ಭದ್ರತೆಗೆ ಮಹತ್ವದ ಹೆಜ್ಜೆ: ಬಿ ಎಸ್ ಎಫ್ ಗೆ ಭೂಮಿ ನೀಡಲು ಒಪ್ಪಿದ ಬಂಗಾಳ ಸರ್ಕಾರ

ಭಾರತ-ಬಾಂಗ್ಲಾ ಗಡಿ ಭದ್ರತೆಗೆ ಮಹತ್ವದ ಹೆಜ್ಜೆ: ಬಿ ಎಸ್ ಎಫ್ ಗೆ ಭೂಮಿ ನೀಡಲು ಒಪ್ಪಿದ ಬಂಗಾಳ ಸರ್ಕಾರ
Summary: The West Bengal BJP government has taken an important decision to further strengthen security on the India-Bangladesh border. The state government's agreement to transfer land to the Border Security Force for the construction of a border fence has attracted attention.

belagavi news :

ಬಾಂಗ್ಲಾ ದೇಶ ಗಡಿಗೆ ಬೇಲಿ: ಬಿ ಎಸ್ ಎಫ್ ಗೆ ಭೂಮಿ ವರ್ಗಾವಣೆಗೆ ಪಶ್ಚಿಮ ಬಂಗಾಳ ಸರ್ಕಾರ ಗ್ರೀನ್ ಸಿಗ್ನಲ್. ಪಶ್ಚಿಮ ಬಂಗಾಳ ಸರಕಾರವು ಬಾಂಗ್ಲಾದೇಶ ಗಡಿಯಲ್ಲಿ ಭದ್ರತಾ ಕ್ರಮಗಳನ್ನು ಬಲಪಡಿಸುವ ಮಹತ್ವದ ನಿರ್ಧಾರ ಕೈಗೊಂಡಿದೆ. ಗಡಿಯಲ್ಲಿ ಬೇಲಿ ನಿರ್ಮಾಣ ಕಾರ್ಯಕ್ಕಾಗಿ ಗಡಿ ಭದ್ರತಾ ಪಡೆ (ಬಿಎಸ್ಎಫ್) ಭೂಮಿ ವರ್ಗಾವಣೆ ಮಾಡಲು ರಾಜ್ಯ ಸರ್ಕಾರ ಅನುಮತಿ ನೀಡಿದೆ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸುವೇಂದು ಅಧಿಕಾರಿ ತಿಳಿಸಿದ್ದಾರೆ.

ಸೋಮವಾರ ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸರ್ಕಾರದ ಮೊದಲ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಹೇಳಿದರು. ರಾಜ್ಯ ಸರ್ಕಾರದ ಅನುಮೋದನೆ ಯೊಂದಿಗೆ ಭೂಮಿ ವರ್ಗಾವಣೆ ಪ್ರಕ್ರಿಯೆ ಇಂದಿನಿಂದಲೇ ಆರಂಭವಾಗಿದ್ದು, ಮುಂದಿನ 45 ದಿನಗಳೊಳಗೆ ಸಂಪೂರ್ಣವಾಗಿ ಪೂರ್ಣಗೊಳ್ಳಲಿದೆ ಎಂದು ಮಾಹಿತಿ ನೀಡಿದ್ದಾರೆ."ಬಾಂಗ್ಲಾದೇಶದ ಗಡಿಯಲ್ಲಿ ಬೇಲಿ ಹಾಕಲು ಬಿ ಎಸ್ ಎಫ್ ಗೆ ಭೂಮಿ ವರ್ಗಾವಣೆ ಮಾಡಲು ಪಶ್ಚಿಮ ಬಂಗಾಳ ಸರ್ಕಾರ ಅನುಮೋದನೆ ನೀಡಿದೆ. ಈ ಪ್ರಕ್ರಿಯೆ ಇಂದಿನಿಂದ ಆರಂಭ. ಹಾಗೂ 45 ದಿನಗಳಲ್ಲಿ ಮುಗಿಯುತ್ತದೆ"ಎಂದು ಅಧಿಕಾರಿ ಮಾಧ್ಯಮದವರಿಗೆ ಮಾಹಿತಿ ನೀಡಿದ್ದಾರೆ.

ನಿರ್ಧಾರದಿಂದ ಭಾರತ-ಬಾಂಗ್ಲಾ ಗಡಿಯಲ್ಲಿ ಭದ್ರತೆ ಮತ್ತಷ್ಟು ಬಲವಾಗುವ ನಿರೀಕ್ಷೆ ಇದೆ. ಅಕ್ರಮ ನುಸುಳುಕು, ಕಳ್ಳ ಸಾಗನೆ ಮತ್ತು ಗಡಿ ಭದ್ರತೆ ಸಂಬಂಧಿಸಿದ ಸವಾಲುಗಳನ್ನು ನಿಯಂತ್ರಿಸಲು ಈ ಬೇಲಿ ನಿರ್ಮಾಣ ಸಹಕಾರಿಯಾಗಲಿದೆ ಎಂದು ಹೇಳಲಾಗುತ್ತಿದೆ.

ಪಶ್ಚಿಮ ಬಂಗಾಳದಲ್ಲಿ ಕೇಂದ್ರದ ಯೋಜನೆಗಳಿಗೆ ಗ್ರೀನ್ ಸಿಗ್ನಲ್: ಕೇಂದ್ರ ಸರ್ಕಾರದ ಪ್ರಮುಖ ಸಾಮಾಜಿಕ ಭದ್ರತಾ ಯೋಜನೆ ಆಯುಷ್ಮಾನ್ ಭಾರತ್ ಆರೋಗ್ಯ ಯೋಜನೆಯ ಹಾಗೂ ಹಲವು ಇತರೆ ಯೋಜನೆಗಳನ್ನು ರಾಜ್ಯದಲ್ಲಿ ಅನುಷ್ಠಾನಗೊಳಿಸುವುದಾಗಿಯೂ ಸಿಎಂ ಘೋಷಿಸಿದ್ದಾರೆ.

ಪಶ್ಚಿಮ ಬಂಗಾಳ ಸರ್ಕಾರವು ಕೇಂದ್ರ ಸರ್ಕಾರದ ಹಲವು ಮಹತ್ವದ ಯೋಜನೆಗಳನ್ನು ರಾಜ್ಯದಲ್ಲಿ ಜಾರಿಗೆ ತರಲು ಮಹತ್ವದ ನಿರ್ಧಾರ ಕೈಗೊಂಡಿದೆ. ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರು ಈ ಕುರಿತು ಮಾಹಿತಿ ನೀಡಿದ್ದು, ಕೇಂದ್ರದ ಯೋಜನೆಗಳನ್ನು ರಾಜ್ಯದಲ್ಲಿ ಅನುಷ್ಠಾನಗೊಳಿಸಲಾಗುವುದು ಎಂದು ಘೋಷಿಸಿದ್ದಾರೆ. ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದ್ದು, ಜನರಿಗೆ ಉತ್ತಮ ಆರೋಗ್ಯ ಸೇವೆ ಮತ್ತು ಸಾಮಾಜಿಕ ಭದ್ರತೆ ಒದಗಿಸುವ ನಿತಿನಲ್ಲಿ ಸರ್ಕಾರ ಕ್ರಮ ಕೈಗೊಂಡಿದೆ ಎಂದು ತಿಳಿದು ಬಂದಿದೆ.

ಇದರ ಜೊತೆಗೆ, ರಾಷ್ಟ್ರೀಯ ಮತ್ತು ರಾಜ್ಯ ಕೇಡರ್ ಗಳ ಅಡಿಯಲ್ಲಿರುವ ಅಧಿಕಾರಿಗಳಿಗೆ ಕೇಂದ್ರ ಸರ್ಕಾರದ ತರಬೇತಿ ಪ್ರಾರಂಭಿಸಲು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲು ಸಚಿವ ಸಂಪುಟವು ಸರ್ಕಾರದ ಪ್ರಮುಖ ಕಾರ್ಯದರ್ಶಿಗೆ ಅಧಿಕಾರ ನೀಡುತ್ತದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ವಿಧಾನಸಭಾ ಚುನಾವಣೆಯ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಷಾ ನೀಡಿದ ಭರವಸೆಯಂತೆ, ಶಾಲಾ ಆಯೋಗ ಅರ್ಜಿದಾರರ ವಯೋಮಿತಿಯನ್ನು ಐದು ವರ್ಷಗಳ ಕಾಲ ವಿಸ್ತರಿಸುವ ಪ್ರಸ್ತಾವನೆಗೂ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ. ಈ ನಿರ್ಧಾರದಿಂದ ಸಾವಿರಾರು ಉದ್ಯೋಗ ಆಕಾಂಕ್ಷಿಗಳಿಗೆ ಉದ್ಯೋಗ ಆಕಾಂಕ್ಷಿಗಳಿಗೆ ದೊಡ್ಡ ಮಟ್ಟದ ನೆರವು ದೊರೆಯಲಿದೆ.

ಅದೇ ರೀತಿ, ರಾಷ್ಟ್ರೀಯ ಮತ್ತು ರಾಜ್ಯ ಕೇಡರ್ ಗಳ ಅಡಿಯಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳಿಗೆ ಕೇಂದ್ರ ಸರ್ಕಾರದ ತರಬೇತಿ ಕಾರ್ಯಗಳನ್ನು ಪ್ರಾರಂಭಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವ ಅಧಿಕಾರವನ್ನು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸಚಿವ ಸಂಪುಟ ನೀಡಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಈ ಹಿಂದಿನ ಸರಕಾರ ಸಂವಿಧಾನವನ್ನು ಉಲ್ಲಂಘಿಸಿ ಬಿಎನ್ಎಸ್ ಜಾರಿಗೆ ತರಲಿಲ್ಲ ಎಂದು ಆರೋಪಿಸಿದವರು, ರಾಜ್ಯದಲ್ಲಿ ಕ್ರಿಮಿನಲ್ ಕಾನೂನು ಜಾರಿಗೆ ತರಲು ಸಂಪುಟ ನಿರ್ಧರಿಸಿದೆ ಎಂದು ತಿಳಿಸಿದ್ದಾರೆ. ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಕುವೆಂದು ಅಧಿಕಾರಿ ಅವರು ಹಿಂದಿನ ಸರ್ಕಾರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂವಿಧಾನವನ್ನು ಉಲ್ಲಂಘಿಸಿ ಭಾರತೀಯ ನ್ಯಾಯಾಂಗ ಸಾಹಿತ್ಯ ಜಾರಿಗೆ ತರಲಿಲ್ಲ ಎಂದು ಆರೋಪಿಸಿದ್ದಾರೆ. ರಾಜ್ಯದಲ್ಲಿ ಕ್ರಿಮಿನಲ್ ಕಾನೂನು ಜಾರಿಗೆ ತರಲು ಸಚಿವ ಸಂಪುಟ ಸಭೆ ಒಪ್ಪಿಗೆ ಸೂಚಿಸಿದೆ ಎಂದು ತಿಳಿಸಿದ್ದಾರೆ.

ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದ ಪಶ್ಚಿಮ ಬಂಗಾಳದ ಸಿಎಂ ಸುವೇಂದು ಅಧಿಕಾರಿ "ಹಿಂದಿನ ಸರಕಾರ ಸಂವಿಧಾನಾತ್ಮಕ ಜವಾಬ್ದಾರಿಯನ್ನು ನಿರ್ಲಕ್ಷಿಸಿತು”. ಆದರೆ ನಮ್ಮ ಸರ್ಕಾರ ರಾಜ್ಯದಲ್ಲಿ ಬಿಎನ್ಎಸ್ ಸೇರಿದಂತೆ ಹೊಸ ಕ್ರಿಮಿನಲ್ ಕಾನೂನುಗಳನ್ನು ಜಾರಿಗೆ ತರಲು ತೀರ್ಮಾನಿಸಿದೆ ಎಂದು ಹೇಳಿದರು. ಇನ್ನು ಸತತ 30 ವರ್ಷಗಳ ಕಾಲ ಕೊಂಟ್ಟೆ ಪುರಸಭೆಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ಸುವೆಂದು ಅಧಿಕಾರಿ ಅವರ ತಂದೆ ಸಿಸಿರ ಅವರು ಸ್ವತಃ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಯಾವ ರೀತಿ ಪಾತ್ರ ವಹಿಸಿದರು ಎಂದು ಕುತೂಹಲ ವಿಚಾರಗಳನ್ನು ಕೂಡ ಸುವೇಂದು ಅಧಿಕಾರಿಯವರು ಹಂಚಿಕೊಂಡಿದ್ದಾರೆ.

Also Read:

ಜೂ.1ರಿಂದ ಹೊಸ ನಿಯಮ : ಗ್ರಾಮೀಣ ಕುಟುಂಬಗಳಿಗೆ 125 ದಿನಗಳ ಕೆಲಸದ ಭರವಸೆ

Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online